- Advertisement -
- Advertisement -
ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಈ ರಾಜ್ಯದ ಸರ್ಕಾರ ಮತ್ತಷ್ಟು ಬಿಗಿ ಕ್ರಮ ಕೈಗೊಂಡಿದ್ದು ದಿಗ್ಬಂಧನ ವಿಧಿಸಲಾಗಿದೆ. ಉತ್ತರಪ್ರದೇಶದಲ್ಲಿ ಪಾನ್ ಮಸಾಲ ಬ್ಯಾನ್ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಾಗಿ ಗಲೀಜು ಆಗುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾನ್ ಮಸಾಲ ಬ್ಯಾನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಉತ್ತರ ಪ್ರದೇಶದ ಜನರಿಗೆ ಪಾನ್ ಮಸಾಲ ತಿನ್ನುವ ಅಭ್ಯಾಸ ಹೆಚ್ಚಾಗಿದೆ. ಅಭ್ಯಾಸಕ್ಕೆ ಬ್ರೇಕ್ ಹಾಕುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪಾನ್ ಮಸಾಲವನ್ನೇ ಬ್ಯಾನ್ ಮಾಡಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ತೀರ್ಮಾನ ಕೈಗೊಂಡಿದೆ. ಕೊರೋನಾ ವೈರಸ್ ತಡೆಯುವ ಕ್ರಮವಾಗಿ ಪಾನ್ ಮಸಾಲ ಉತ್ಪಾದನೆ ಮತ್ತು ಮಾರಾಟ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
- Advertisement -
