Friday, June 5, 2026
Homeಕರಾವಳಿಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪಂಜದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪಂಜದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

- Advertisement -
- Advertisement -

ಪಂಜ: ಕಳೆದ ದಿನ ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರ ಜತಿನ್ ಕುಮಾರ್(30)(ದೀಕ್ಷಿತ್) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಅದ್ವೈತ್ ಹುಂಡೈ ಕಂಪೆನಿಯಲ್ಲಿ ಕಳೆದ 8 ವರ್ಷಗಳಿಂದ ಉದ್ಯೋಗಿಯಾಗಿರುವ ಜತಿನ್, ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದ ಕೆಲ ಕ್ಷಣದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ವಿಷಯ ತಿಳಿದ ಸ್ನೇಹಿತರು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇಂದು ಜತಿನ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮತ್ತು ಕೊರೋನಾ ಟೆಸ್ಟ್ ಮುಗಿದ ನಂತರ ಮೃತದೇಹವನ್ನು ಮನೆಯವರಿಗೆ ಬಿಟ್ಟು ಕೊಡಲಿದ್ದಾರೆ. ಮೃತರು ತಂದೆ, ತಾಯಿ, ಸಹೋದರ ಶಿವಕುಮಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!