Thursday, June 4, 2026
Homeಕೊಡಗುಕೊಡಗಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೊಡಗಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಕೊಡಗು;ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.

ಮಂಗಳವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!