Thursday, June 4, 2026
Homeಅಪರಾಧಅನ್ಯಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ ತಾಯಿ

ಅನ್ಯಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ಮಗಳನ್ನೇ ಕೊಲೆ ಮಾಡಿದ ತಂದೆ ತಾಯಿ

- Advertisement -
- Advertisement -

ಮೈಸೂರು: ಯುವತಿಯೊಬ್ಬಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ತಂದೆ, ತಾಯಿ ಇಬ್ಬರು ಸೇರಿ ಅಪ್ರಾಪ್ತ ಮಗಳನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಕೊಲೆಗೀಡಾದ ಅಪ್ರಾಪ್ತೆ ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17)ಎಂದು ತಿಳಿದುಬಂದಿದೆ. ಈಗಾಗಲೇ ಮಗಳನ್ನು ಕೊಂದ ಆರೋಪದ ಮೇಲೆ ತಂದೆ ಸುರೇಶ್ ಹಾಗೂ ತಾಯಿ ಬೇಬಿಯನ್ನು ಬಂಧಿಸಿದ್ದಾರೆ. ಕೊಲೆಗೀಡಾದ ಅಪ್ರಾಪ್ತೆಯು ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಎನ್ನುವ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಪ್ರೀತಿಗೆ ಶಾಲಿನಿ ಪೋಷಕರು ವಿರೋಧಿಸಿದ್ದರು.

ಆದರೆ ಪ್ರೇಮಿಗಳು ಮದುವೆಯಾಗಲು ನಿರ್ಧರಿಸಿದ್ದು, ಪ್ರಿಯಕರನಿಗಾಗಿ ಶಾಲಿನಿ ಮನೆ ಬಿಟ್ಟಿದ್ದಳು. ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಹೀಗಾಗಿ ಶಾಲಿನಿ ಬಾಲಮಂದಿರಕ್ಕೆ ಸೇರಿಕೊಂಡಿದ್ದಳು.

ಇತ್ತೀಚೆಗಷ್ಟೆ ಮಗಳನ್ನು ಬಾಲಮಂದಿರದಿಂದ ಕರೆತಂದ ಪೋಷಕರಾದ ಸುರೇಶ್ ಹಾಗೂ ಬೇಬಿ ಮಗಳನ್ನು ಕೊಲೆ ಮಾಡಿದ್ದಾರೆ. ಶಾಲಿನಿ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿದೆ. ತಮಗೆ ಅವಮಾನ ಮಾಡಿದಕ್ಕೆ ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!