Sunday, April 28, 2024
HomeUncategorizedಮಕ್ಕಳಿಗೆ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹಿಸಿ. ರಕ್ಷಿತ್ ಶಿವರಾಂ

ಮಕ್ಕಳಿಗೆ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹಿಸಿ. ರಕ್ಷಿತ್ ಶಿವರಾಂ

spot_img
- Advertisement -
- Advertisement -

ಬೆಳ್ತ೦ಗಡಿ: ವಿದ್ಯಾರ್ಥಿಗಳು ಪಠ್ಯಚಟುವಟಿಕೆಯ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಪ್ರತಿಭಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಪಠ್ಯ ಕ್ರೀಡೆ, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕೃತಿ ವಿಭಾಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರುವುದನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಅರಿತುಕೊಳ್ಳಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.


ಅವರು ಬೆಸ್ಟ್ ಫೌಂಡೇಷನ್ ಬೆಳ್ತಂಗಡಿ ಆಶ್ರಯದಲ್ಲಿ ಬೆಸ್ಟ್ ಮುಂಡೂರು ಸಹಕಾರದೊಂದಿಗೆ ನಡೆದ ದೀವಿಗೆ ಭವಿಷ್ಯದ ದಾರಿಗೆ.. ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದು ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಹೊಂದಿದಷ್ಟೆ, ಕ್ರೀಡಾ ಮತ್ತು ಕಲೆ-ಸಂಸ್ಕೃತಿ ಕ್ಷೇತ್ರ ಅಭಿವೃದ್ಧಿ ಸಾಧಿಸುತ್ತದೆ. ಈ ಎರಡು ಕ್ಷೇತ್ರಗಳು ಬೆಳವಣಿಗೆಯಾಗಬೇಕಾದರೆ ಶಾಲಾ-ಕಾಲೇಜುಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಚಲನಚಿತ್ರ ನಿರ್ದೇಶಕ ಸ್ಮೀತೆಶ್ ಎಸ್ ಬಾರ್ಯ ಮಕ್ಕಳ ಶಿಕ್ಷಣದ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮತ್ತು ಮಕ್ಕಳು ಮತ್ತು ಸಮಾಜದ ಜವಾಬ್ದಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಡೂರು ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅರವಿಂದ್ ಭಟ್ ಮಾಡಿದರು.ಕಾರ್ಯಕ್ರಮದಲ್ಲಿ ಸಾಮಾಜಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಡಾ।ಎಂ ಎಂ ದಯಕರ್ ಭಟ್ ,ಕಲಾ ಕ್ಷೇತ್ರದಲ್ಲಿ ಸ್ಮೀತೆಶ್ ಎಸ್ ಬಾರ್ಯ ,ಹಾಗೂ ನಿವೃತ್ತ ಯೋಧ ಗುರುವಪ್ಪ ಪೂಜಾರಿ ಆಶಾ ಕಾರ್ಯಕರ್ತೆ ಶ್ರೀಮತಿ ಸುಶೀಲ ಶೆಟ್ಟಿ ,ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಕೌಶಿಕ್ ,ರೇಷ್ಮಾ ನಿಶಾ ವೇಗಸ್ ಹಾಗು ಗ್ರಾಮದ ಪುರಂದರ ಆಚಾರ್ಯ ರವನ್ನು ಗೌರವಿಸಲಾಯಿತು.ಮುಖ್ಯ ಅಥಿತಿಗಳಾಗಿ ಮುಂಡೂರು ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾದ ಚಾಮರಾಜ ಸೇಮಿತ,ಚರ್ಚ್ ಪಾಲನಾ ಮಂಡಳಿ ಮಾಜಿ ಉಪಾಧ್ಯಕ್ಷ ಅತ್ತುಸ್ ವೇಗಸ್,ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಸುಲೈಮನ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ ಸಾಲಿಯಾನ್,ಶಾಲ ಮುಖ್ಯೋಪಾಧ್ಯಾಯರಾದ ಕಲ್ಲೇಶ್ ಕೆ.ಬಿ ,ಶಾರದಾಂಬ ಯುವಕ ಮಂಡಲ ಅಧ್ಯಕ್ಷ ರಮಾನಂದ ಸಾಲಿಯಾನ್ ,ಜ್ಯೋತಿ ಯುವತಿ ಮಂಡಲ ಅಧ್ಯಕ್ಷೆ ಸುಶೀಲ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮುಂಡೂರು ಗ್ರಾಮದ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು.ಶಿವಶಂಕರ್ ಗೇರುಕಟ್ಟೆ ಆಶಯ ಗೀತೆಯನ್ನು ಹಾಡಿದರು ,ಅಶೋಕ್ ಕೊಡಕ್ಕಲ್ ಸ್ವಾಗತಿಸಿ ಅಬ್ಸಾಲಿ ಧನ್ಯವಾದ ಸಲ್ಲಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು

- Advertisement -
spot_img

Latest News

error: Content is protected !!