Sunday, May 19, 2024
Homeಕ್ರೀಡೆಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್

ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್

spot_img
- Advertisement -
- Advertisement -

ನವದೆಹಲಿ: ಕೂಲ್ ಕ್ಯಾಪ್ಟನ್ ಧೋನಿ, ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್ ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ

ಈ  ಮೂಲಕ 18 ವರ್ಷಗಳ ಅವರ ಸುದೀರ್ಘ ಅವಧಿಯ ವೃತ್ತಿ ಜೀವನ ಅಂತ್ಯಕಂಡಿದೆ. 35 ವರ್ಷದ ಪಾರ್ಥಿವ್ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟಿ20 ಪಂದ್ಯಗಳಲ್ಲಿ ಭಾರತ ಪರ ವಾಗಿ ಕಾಣಿಸಿಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ನಲ್ಲಿ ಗುಜರಾತ್ ಪರ 194 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು.

2002ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಅವರು ಟೆಸ್ಟ್ ನಲ್ಲಿ ಅತಿ ಕಿರಿಯ ವಿಕೆಟ್ ಕೀಪರ್ ಎಂಬ ಗೌರವಕ್ಕೆ ಪಾತ್ರರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಆರಂಭ ವನ್ನು ಪಡೆದರೂ, 2004ರಲ್ಲಿ ದಿನೇಶ್ ಕಾರ್ತಿಕ್ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಆಗಮದಿಂದ ಪಟೇಲ್ ತಮ್ಮ ಸ್ಥಾನವನ್ನು ಕಳೆದುಕೊಂಡರು. 2004ರ ನವೆಂಬರ್ ನಲ್ಲಿ ಅಹಮದಾಬಾದ್ ನಲ್ಲಿ ನಡೆದ ಮೊದಲ ರಣಜಿ ಟ್ರೋಫಿ ಪಂದ್ಯದಲ್ಲಿ ಅವರು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು.

- Advertisement -
spot_img

Latest News

error: Content is protected !!