Wednesday, June 24, 2026
Homeತಾಜಾ ಸುದ್ದಿಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆ, ಮಾಹಿತಿ ನೀಡಲು ಒತ್ತಾಯಿಸುತ್ತಿಲ್ಲ; ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ

ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆ, ಮಾಹಿತಿ ನೀಡಲು ಒತ್ತಾಯಿಸುತ್ತಿಲ್ಲ; ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಸೆಪ್ಟೆಂಬರ್ 22 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಮತ್ತು ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ.

ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಅಥವಾ ಭಾಗವಹಿಸದೇ ಇರುವುದನ್ನು ಜನರ ಮತ್ತು ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಆಯೋಗ ಹೇಳಿದೆ.

ಅಲ್ಲದೇ ಸಮೀಕ್ಷೆ ವೇಳೆ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದೂ ಸ್ಪಷ್ಟೀಕರಿಸಲಾಗಿದೆ ಅಂತ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ. ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಪ್ರಾರಂಭಿಸಿದ್ದು ಅಕ್ಟೋಬರ್ 7 ರವರೆಗೆ ನಡೆಯಲಿದೆ.

- Advertisement -

Latest News

error: Content is protected !!