Thursday, June 25, 2026
Homeತಾಜಾ ಸುದ್ದಿಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ನಟ ಸೂರಜ್

ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ನಟ ಸೂರಜ್

- Advertisement -
- Advertisement -

ಬೆಂಗಳೂರು; ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್ ಅಪಘಾತಕ್ಕೆ ಒಳಗಾಗಿ ಕಾಲು ಕಳೆದುಕೊಂಡಿದ್ದಾರೆ.

ಸೂರಜ್ ಊಟಿಗೆ ತೆರಳುತ್ತಿದ್ದಾಗ ಅವರಿಗೆ ನಂಜನಗೂಡಿನ ಬಳಿ ಲಾರಿ ಡಿಕ್ಕಿ ಆಗಿದೆ. ಪರಿಣಾಮ  ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಂಧಿನಗರಕ್ಕೆ ಎಂಟ್ರಿ ನೀಡಬೇಕು ಎಂದು ಸೂರಜ್​ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸೇರಿದಂತೆ ಒಂದೆರಡು ಸಿನಿಮಾಗಳನ್ನು ಅವರು ಅನೌನ್ಸ್​ ಮಾಡಿದ್ದರು. ಅಷ್ಟರಲ್ಲಾಗಲೇ ಅವರಿಗೆ ಈ ದುಸ್ಥಿತಿ ಎದುರಾಗಿದೆ.

ಸೂರಜ್​ ಅವರು ಬೈಕ್​ನಲ್ಲಿ ಊಟಿಗೆ ತೆರಳುತ್ತಿದ್ದರು. ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್​ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕತ್ತರಿಸುವುದು ಅನಿವಾರ್ಯ ಆಯಿತು. ಕನ್ನಡ ಚಿತ್ರರಂಗದಲ್ಲಿ ನಟನಾಗಬೇಕು ಎಂದು ಸೂರಜ್​ ಕನಸು ಕಂಡಿದ್ದರು. ಕೆಲವು ಚಿತ್ರಗಳ ಶೂಟಿಂಗ್​ನಲ್ಲೂ ಪಾಲ್ಗೊಂಡಿದ್ದರು. ಆದರೆ ಈಗ ಅವರು ಕಾಲು ಕಳೆದುಕೊಂಡು ಸಂಕಟಪಡುವಂತಾಗಿರುವುದು ನೋವಿನ ಸಂಗತಿ.

- Advertisement -

Latest News

error: Content is protected !!