- Advertisement -
- Advertisement -
ಉಡುಪಿ: ಮಹಿಳೆಯೊಬ್ಬರು ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಉಡುಪಿ ರೈಲ್ವೇ ನಿಲ್ದಾಣದಲ್ಲಿ ಮಹಿಳೆ ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದಿದ್ದು, ಕೂಡಲೇ ಮಹಿಳೆಯನ್ನು ಆರ್ ಪಿಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಇಂದು ಬೆಳಗ್ಗೆ ಮಂಗಳೂರು- ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತುವ ಸಂಧರ್ಭದಲ್ಲಿ ಅವಘಡ ಸಂಭವಿಸಿದೆ.ತಕ್ಷಣ ಆರಪಿಎಫ್ ಸಿಬ್ಬಂದಿ ಅರ್ಪಣಾ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ
- Advertisement -