Tuesday, April 30, 2024
Homeಅಪರಾಧದಾರಿ ತಪ್ಪಿಸುವ ಜಾಹೀರಾತು ನೀಡಿದ್ದ ಪತಂಜಲಿ; ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ ಸಂಸ್ಥೆ

ದಾರಿ ತಪ್ಪಿಸುವ ಜಾಹೀರಾತು ನೀಡಿದ್ದ ಪತಂಜಲಿ; ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ ಸಂಸ್ಥೆ

spot_img
- Advertisement -
- Advertisement -

ಬೆಂಗಳೂರು:  ಪತಂಜಲಿ ಆಯುರ್ವೇದ ಕಂಪನಿ ಸುಳ್ಳು ಹಾಗೂ ದಾರಿ ತಪ್ಪಿಸುವ ಜಾಹೀರಾತು ನೀಡಿದ್ದು, ಈ ಕುರಿತಂತೆ ಬೇಷರತ್‌ ಕ್ಷಮೆ ಕೋರಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅಫಿಡವಿಟ್‌ನಲ್ಲಿ, ‘ಭವಿಷ್ಯದಲ್ಲಿ ಈ ಜಾಹಿರಾತುಗಳನ್ನು ಪ್ರಕಟಿಸುವುದಿಲ್ಲ. ಕಂಪನಿಯ ಆಯುರ್ವೇದ ಉತ್ಪನ್ನಗಳನ್ನು ತೆಗೆದುಕೊಳ್ಳುವ ಮೂಲಕ ಆರೋಗ್ಯಕರ ಜೀವನ ಸಾಗಿಸುವುದರ ಬಗ್ಗೆ ಜನರಿಗೆ ಪ್ರೋತ್ಸಾಹಿಸುವುದಷ್ಟೇ ನಮ್ಮ ಉದ್ದೇಶವಾಗಿತ್ತು,’ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ನೀಡಿಲಾಗಿದ್ದ ನೋಟಿಸ್‌ಗೆ ಉತ್ತರಿಸದಿದ್ದರಿಂದ ಗರಂ ಆಗಿದ್ದ ಸುಪ್ರೀಂ ಕೋರ್ಟ್‌, ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿ ಮಾಡಿ, ಖುದ್ದು ಹಾಜರಿರಬೇಕು ಎಂದು ಬಾಬಾ ರಾಮ್‌ದೇವ್‌ ಹಾಗೂ ಬಾಲಕೃಷ್ಣ ಅವರಿಗೆ ಮಂಗಳವಾರ ಸೂಚಿಸಿತ್ತು. ಇದರ ಬೆನ್ನಲ್ಲೇ ಬೇಷರತ್‌ ಕ್ಷಮೆ ಯಾಚಿಸಿ ಪತಂಜಲಿ ಸಂಸ್ಥೆಯು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

- Advertisement -
spot_img

Latest News

error: Content is protected !!