Thursday, June 4, 2026
Homeತಾಜಾ ಸುದ್ದಿದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು: ಬುದ್ದಿಹೇಳುವ ಕೆಲಸವನ್ನು ಮಾಡಬೇಕು: ಕೆ.ಎಸ್‌.ಈಶ್ವರಪ್ಪ

ದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು: ಬುದ್ದಿಹೇಳುವ ಕೆಲಸವನ್ನು ಮಾಡಬೇಕು: ಕೆ.ಎಸ್‌.ಈಶ್ವರಪ್ಪ

- Advertisement -
- Advertisement -

ಶಿವಮೊಗ್ಗ: ದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು.ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಅಥವಾ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ, ಎಸ್ ಡಿಪಿಐ, ಪಿಎಫ್ ಐ ರಾಷ್ಟ್ರದ್ರೋಹಿ ಸಂಘಟನೆಗಳಾಗಿದ್ದು, ಮುಸ್ಲಿಂ ಯುವಕರನ್ನು ಇಸ್ಲಾಮಿಕ್ ಸ್ಟೇಟ್ಸ್ ಜೊತೆ ಸೇರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಹಿರಿಯರು ಎಚ್ಚರಿಕೆ ವಹಿಸಬೇಕು. ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ರಾಷ್ಟ್ರಭಕ್ತರಾಗಬೇಕು. ರಾಷ್ಟ್ರದ್ರೋಹಿಗಳಿಗೆ ಬುದ್ದಿಹೇಳುವ ಕೆಲಸವನ್ನು ಮುಸ್ಲಿಂ ಸಮುದಾಯದ ಹಿರಿಯರು ಮಾಡಬೇಕು ಎಂದು ಹೇಳಿದರು.

- Advertisement -

Latest News

error: Content is protected !!