Saturday, June 29, 2024
Homeತಾಜಾ ಸುದ್ದಿನಟ ದರ್ಶನ್ ಅರೆಸ್ಟ್ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಅರೆಸ್ಟ್

ನಟ ದರ್ಶನ್ ಅರೆಸ್ಟ್ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಅರೆಸ್ಟ್

spot_img
- Advertisement -
- Advertisement -

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಟ ದರ್ಶನ್ ಸೇರಿ ಒಟ್ಟು 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಸ್ನೇಹಿತೆ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಆರ್ ಆರ್ ನಗರ ಪೊಲೀಸರು ಪವಿತ್ರಾರನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಅವರನ್ನು ವಿತಾರಣೆಗೆ ಒಳಪಡಿಸುತ್ತಿದ್ದಾರೆ. ಜೂನ್‌ 8 ರಂದು ರೇಣುಕಾ ಸ್ವಾಮಿ ಕೊಲೆ ಮಾಡಿ ಮೃತದೇಹವನ್ನು ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿ ಎಸೆಯಲಾಗಿತ್ತು.ಚಿತ್ರದುರ್ಗದಿಂದ ಬೆಂಗಳೂರಿಗೆ ರೇಣುಕಾಸ್ವಾಮಿಯನ್ನು ಕರೆಸಿಕೊಂಡು ಕೊಲೆ ಮಾಡಲಾಗಿತ್ತು.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಫೋಟೋ ಕಳುಹಿಸಿ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಮೈಸೂರಿನಿಂದ ದರ್ಶನ್ ಅವರನ್ನು ಬೆಂಗಳೂರಿಗೆ ಕರೆ ತರಲಾಗುತ್ತಿದೆ.

- Advertisement -
spot_img

Latest News

error: Content is protected !!