- Advertisement -
- Advertisement -
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದ ಸೂತ್ರಧಾರಿ, ಎ1 ಆರೋಪಿ ಪವಿತ್ರ ಗೌಡ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಕಸ್ಟಡಿಯಲ್ಲಿದ್ದಾಳೆ. ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪವಿತ್ರಳನ್ನು ಇರಿಸಲಾಗುತ್ತೆ. ಹಗಲು ಅನ್ನಪೂರ್ಣೇಶ್ವರಿ ಠಾಣೆಗೆ ವಿಚಾರಣೆಗೆ ಕರೆ ತರಲಾಗುತ್ತೆ.
ಇಂದು ಠಾಣೆಯಲ್ಲಿ ವಿಚಾರಣೆ ಮಾಡುತ್ತಿದ್ದಾಗಲೇ ಆಕೆಯ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಠಾಣೆಗೆ ವೈದ್ಯರು ಬಂದಿದ್ದಾರೆ. ಅವರು ಆಕೆಯನ್ನು ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಅಲ್ಲಿಂದ ನೇರವಾಗಿ ಠಾಣೆಗೆ ಕರೆ ತರಲಾಗುತ್ತದೆ ಎನ್ನಲಾಗಿದೆ.
- Advertisement -