Friday, June 26, 2026
Homeತಾಜಾ ಸುದ್ದಿಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಅಪೇಕ್ಷಾ ಪುರೋಹಿತ್ & ನಿರ್ದೇಶಕ ಪವನ್ ಒಡೆಯರ್!

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಅಪೇಕ್ಷಾ ಪುರೋಹಿತ್ & ನಿರ್ದೇಶಕ ಪವನ್ ಒಡೆಯರ್!

- Advertisement -
- Advertisement -

ಬೆಂಗಳೂರು: ‘ಗೂಗ್ಲಿ’, ‘ನಟಸಾರ್ವಭೌಮ’ ಸಿನಿಮಾ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ಶೀಘ್ರದಲ್ಲಿಯೇ ತಂದೆ-ತಾಯಿಗಳಾಗುತ್ತಿದ್ದಾರೆ. ಈ ಸಂಭ್ರಮದ ಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಅಲ್ಲದೇ ಅಪೇಕ್ಷಾ ಪುರೋಹಿತ್ ಗರ್ಭಿಣಿ ಫೋಟೋಶೂಟ್ ಮಾಡಿಸಿದ್ದಾರೆ. ಪತ್ನಿಯ ಜೊತೆ ಪವನ್ ಒಡೆಯರ್ ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ವಿವಿಧ ರೀತಿಯಲ್ಲಿ ದಂಪತಿ ಫೋಟೋಶೂಟ್ ಮಾಡಿದ್ದು, ಇಬ್ಬರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋವನ್ನು ಪವನ್ ಅವರು ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿದ್ದು, “ಸದಾ ವಟ ವಟ ಮಾತನಾಡುವ ನಾನು. ಮೌನಿಯಾದ ಕ್ಷಣಗಳು. ಹೌದು ನಮ್ಮ ಜೀವನದ ಅತ್ಯಂತ ಸುಂದರ ದಿನಗಳಿಗಾಗಿ ಹಾತೊರೆಯುತ್ತಿದ್ದೇವೆ. ಮಾತುಗಳಲ್ಲಿ ಆ ಖುಷಿ ಹೇಳಲಾಗದೆ. ಹಾಡಿನ ರೂಪದಲ್ಲಿ ವ್ಯಕ್ತಪಡಿಸುವ ಪ್ರಯತ್ನ ಮಾಡಿದ್ದೇವೆ. ಆ ಮುಗುಳುನಗೆ ಹಾಡಿಗಾಗಿ ನಿರೀಕ್ಷಿಸಿ” ಎಂದು ಬರೆದುಕೊಂಡಿದ್ದಾರೆ. ಪವನ್ ಒಡೆಯರ್ ಹಾಡಿನ ಮೂಲಕ ತಾವು ತಂದೆಯಾಗುತ್ತಿರುವ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶೀಫ್ರದಲ್ಲೇ ಹಾಡನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

2018ರಲ್ಲಿ ಮದುವೆಯಾಗಿದ್ದ ಪವನ್-ಅಪೇಕ್ಷಾ
ಈ ದಂಪತಿ ಅದ್ದೂರಿಯಾಗಿ ವಿವಿಧ ರೀತಿಯ ಕಾಸ್ಟ್ಯೂಮ್ ಧರಿಸಿ ಫೋಟೋಶೂಟ್ ಮಾಡಿಸಿಕೊಂಡಿದೆ. ಇವರಿಬ್ಬರಿಗೂ ಮದುವೆಗೆ ಮುನ್ನ ಒಂದು ವರ್ಷಗಳ ಕಾಲದ ಪರಿಚಯವಿತ್ತು. ಪರಸ್ಪರ ಕುಟುಂಬದ ಸಮ್ಮುಖದಲ್ಲಿಯೇ 2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಾಗಲಕೋಟೆಯಲ್ಲಿ ಈ ಜೋಡಿಯ ನಿಶ್ಚಿತಾರ್ಥ, ಮದುವೆ ಅದ್ದೂರಿಯಾಗಿ, ಶಾಸ್ತ್ರೋಕ್ತವಾಗಿ ನಡೆದಿತ್ತು. ನಟ ಪುನೀತ್ ರಾಜ್‌ಕುಮಾರ್ ಅವರು ಈ ಮದುವೆಗೆ ಸಾಕ್ಷಿಯಾಗಿದ್ದರು. ಆನಂತರ ಬೆಂಗಳೂರಿನಲ್ಲಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಅನೇಕ ನಟ-ನಟಿಯರು, ನಿರ್ದೇಶಕರು, ತಂತ್ರಜ್ಞರು ಭಾಗಿಯಾಗಿದ್ದರು.

ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ‘ತ್ರಿವೇಣಿ ಸಂಗಮ’, ‘ಕಿನ್ನರಿ’, ‘ಸಾಗುತ ದೂರ ದೂರ’ ‘ಮರಳಿ ಬಂದಳು ಸೀತೆ’ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಟಿಎನ್ ಸೀತಾರಾಮ್ ಅವರ ‘ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

- Advertisement -

Latest News

error: Content is protected !!