Wednesday, July 15, 2026
Homeಚಿಕ್ಕಮಗಳೂರು5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ

5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ

- Advertisement -
- Advertisement -

ಚಿಕ್ಕಮಗಳೂರು: 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮದಲ್ಲಿ ನಡೆದಿದೆ. ತಂಗ್ಲಿ ಗ್ರಾಮ ಪಂಚಾಯತ್‌ನ ಪಿಡಿಓ ನಂಜುಂಡಮ್ಮ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸರಸ್ವತಿಪುರದ ತಿಮ್ಮಶೆಟ್ಟಿ ಎಂಬವರಿಂದ ಸೈಟ್‌ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ.

ಗ್ರಾಮ ಪಂಚಾಯತ್ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಿಡಿದಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!