Wednesday, July 15, 2026
Homeಅಪರಾಧಲಾರಿ ಢಿಕ್ಕಿ ಹೊಡೆದು ಪಾದಚಾರಿ ಸಾವು

ಲಾರಿ ಢಿಕ್ಕಿ ಹೊಡೆದು ಪಾದಚಾರಿ ಸಾವು

- Advertisement -
- Advertisement -

ಉಡುಪಿ: ಸಂತೆಕಟ್ಟೆಯ ರಾ.ಹೆ.ಬಳಿಯಲ್ಲಿ ವ್ಯಕ್ತಿಯೋರ್ವ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿ ಸಂತೆಕಟ್ಟೆಯ ರಾ.ಹೆ.ಬಳಿಯಲ್ಲಿ ನೀರು ಹರಿದು ಹೋಗಲು ಚರಂಡಿಯ ಡ್ರಿಲ್‌ ಕೆಲಸ ಮಾಡುತ್ತಿರುವ ರವಿಕುಮಾರ್‌ ಎನ್ನಲಾಗಿದೆ.

ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ ಚಾಲಕ ದೀಪಕ್‌ ಕುಮಾರ್‌ ಲಾರಿಯನ್ನು ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರವಿ ಕುಮಾರ್‌ ಅವರಿಗೆ ಢಿಕ್ಕಿ ಹೊಡೆದಿದ್ದು, ಕೂಡಲೇ ರವಿಕುಮಾರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಯಿತು. ನಂತರದಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಉಡುಪಿಯ ಖಾಸಗಿ ಆಸ್ಪತ್ರೆ ದಾಖಲಿಸಿದರೂ ಚಿಕಿತ್ಸೆ ಫಲಕರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!