Thursday, June 25, 2026
Homeಕರಾವಳಿಮಂಗಳೂರುಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಸಾವು

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಸಾವು

- Advertisement -
- Advertisement -

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸಾವನ್ನಪ್ಪಿರುವ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ. ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ (32) ಮೃತ ದುರ್ದೈವಿ.

ಶಂಶುದ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು.ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿತ್ತು.ಪರಿಣಾಮ ಶಂಶುದ್ದೀನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!