Thursday, May 2, 2024
Homeಕರಾವಳಿಉಡುಪಿದೇವಸ್ಥಾನದ ಆಸುಪಾಸಿನಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಪೇಜಾವರ ಶ್ರೀ ಮನವಿ

ದೇವಸ್ಥಾನದ ಆಸುಪಾಸಿನಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಪೇಜಾವರ ಶ್ರೀ ಮನವಿ

spot_img
- Advertisement -
- Advertisement -

ಉಡುಪಿ: ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಶುಕ್ರವಾರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.‌

ಈ ಸಂದರ್ಭ ದ.ಕ ಜಿಲ್ಲೆಯ ಪ್ರಾಚೀನ ತೀರ್ಥ ಕ್ಷೇತ್ರ ನರಹರಿ ಪರ್ವತ ಹಾಗು ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಕ್ಷೇತ್ರದ ಪಾವಿತ್ರ್ಯಕ್ಕೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ವಿವರಿಸಿ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಲ್ಲಿ ಗಣಿಗಾರಿಕೆ ನಿಲ್ಲಿಸಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಲಿಖಿತ ಅಪೇಕ್ಷೆ ಸಲ್ಲಿಸಿದರು.

ಸ್ಪಂದಿಸಿದ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ವಿಚಾರ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ. ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ರಾಮ್ ಮನೋಹರ್ ಪ್ರಸಾದ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ನಂದನ್ ಕುಮಾರ್ ಉಪಸ್ಥಿತರಿದ್ದರು.‌

- Advertisement -
spot_img

Latest News

error: Content is protected !!