Thursday, June 4, 2026
Homeಕರಾವಳಿಉಡುಪಿಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿದ ಪೇಜಾವರ ಶ್ರೀ

ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿದ ಪೇಜಾವರ ಶ್ರೀ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ‌. ಕೃಷ್ಣ ಅವರನ್ನು ಇಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿದರು.

ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ಎಸ್.ಎಂ. ಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಿದ‌ ಪೇಜಾವರ ಸ್ವಾಮೀಜಿ, ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿ ಗೌರವಿಸಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕೆಲವು ಹೊತ್ತು ಕೃಷ್ಣ ಅವರ ಜೊತೆ ಮಾತುಕತೆಯನ್ನೂ ನಡೆಸಿದರು.

- Advertisement -

Latest News

error: Content is protected !!