Monday, May 20, 2024
Homeಕರಾವಳಿಉಡುಪಿಹಿಂದೂಗಳ ದೇವಾಲಯಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು; ಗಂಗಾವತಿಯಲ್ಲಿ ಪೇಜಾವರ ಶ್ರೀ ಹೇಳಿಕೆ

ಹಿಂದೂಗಳ ದೇವಾಲಯಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು; ಗಂಗಾವತಿಯಲ್ಲಿ ಪೇಜಾವರ ಶ್ರೀ ಹೇಳಿಕೆ

spot_img
- Advertisement -
- Advertisement -

ಕೊಪ್ಪಳ: ಹಿಂದೂಗಳ ದೇವಾಲಯಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾತನಾಡಿದ ಪೇಜಾವರ ಶ್ರೀ, ಬೇರೆ ಧರ್ಮದವರ ಪ್ರಾರ್ಥನಾ ಮಂದಿರಗಳನ್ನು ಅವರ ಸ್ವಾಯತ್ತತೆಗೆ ಬಿಟ್ಟು ಕೊಡಲಾಗಿದ್ದು, ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ, ಮಂದಿರ ಕಟ್ಟುವುದು ದೊಡ್ಡದಲ್ಲ, ಮಂದಿರವನ್ನು ಉಳಿಸಿಕೊಂಡು ಹೋಗುವುದು ದೊಡ್ಡ ಜವಾಬ್ದಾರಿ ಎಂದು ಹೇಳಿರುವ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಮಂದಿರ ಮಂದಿರವಾಗಿ ಉಳಿಯಬೇಕಾದರೆ ಹಿಂದೂಗಳು ಹಿಂದೂಗಳಾಗಿ ಉಳಿಯಬೇಕು ಎಂದಿದ್ದಾರೆ.

ಇನ್ನು, ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಪ್ರಮಾಣದಲ್ಲಿ ಇಳಿಮುಖ ವಿಚಾರಕ್ಕೆ ಪ್ರತಿಕ್ರಿಯಿಸಿದ ಸ್ವಾಮೀಜಿ,
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾದರೆ ತೊಂದರೆಗಳು ದೂರವಾಗುತ್ತವೆ ಎಂದು ಹೇಳಿದ್ದಾರೆ.

ಅಲ್ಲದೇ, ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡಿದ್ದು, ಅದನ್ನು ಕೆಡವುತ್ತೇವೆ ಎನ್ನುವವರು ಸರ್ವೋಚ್ಚ ನ್ಯಾಯಾಲಯ ಮತ್ತು ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದೂ ಪೇಜಾವರ ಸ್ವಾಮೀಜಿ ಹೇಳಿದ್ದಾರೆ

- Advertisement -
spot_img

Latest News

error: Content is protected !!