Thursday, June 25, 2026
Homeಕರಾವಳಿಉಡುಪಿಸನಾತನ ಧರ್ಮ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಸನಾತನ ಧರ್ಮ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

- Advertisement -
- Advertisement -

ಮೈಸೂರು: ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾ‌ಡು ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಮತ್ತು ಸಚಿವ ಉದಯ ನಿಧಿ ಸ್ವಾಲಿನ್  ಹೇಳಿಕೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.

ಮೈಸೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಸ್ವಾಮೀಜಿ, ವೀಡಿಯೋ ಮೂಲಕ ಖಂಡನೆ ವ್ಯಕ್ತಪಡಿಸಿದ್ದು, ಒಂದು ರಾಜ್ಯದ ಸಚಿವರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ, ಸನಾತನ ಎಂದರೆ ಸದಾ ಕಾಲವೂ ಇರುವಂತಹದ್ದು ಎಂದರ್ಥ ಎಂದು ಹೇಳಿದ್ದಾರೆ.

ಅಲ್ಲದೇ, ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮವಾಗಿದ್ದು, ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋ ಪ್ರವೃತ್ತಿ ಸರಿಯಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

ಸನಾತನ ಧರ್ಮ ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

- Advertisement -

Latest News

error: Content is protected !!