Thursday, June 4, 2026
Homeಕರಾವಳಿಉಡುಪಿನವದೆಹಲಿಯಲ್ಲಿ ಲಾಲ್ ಕೃಷ್ಣ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀ

ನವದೆಹಲಿಯಲ್ಲಿ ಲಾಲ್ ಕೃಷ್ಣ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀ

- Advertisement -
- Advertisement -

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಇಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿದ್ದಾರೆ.

ನವದೆಹಲಿಯ ಅಡ್ವಾಣಿ ನಿವಾಸದಲ್ಲಿ ಭೇಟಿ ಮಾತುಕತೆ ನಡೆಸಿದ ಪೇಜಾವರ ಶ್ರೀ, ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದ ನೀಡಿದ್ದಾರೆ‌.

ಮಾತುಕತೆ ವೇಳೆ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ನೆನಪಿಸಿಕೊಂಡ ಎಲ್.ಕೆ. ಅಡ್ವಾಣಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು
ರಾಮ ಮಂದಿರ ಹೋರಾಟದ ಬಗ್ಗೆ ನೆನಪಿಸಿಕೊಂಡಿದ್ದಾರೆ.

ಇದೇ ವೇಳೆ ಅಡ್ವಾಣಿಯವರ ಆರೋಗ್ಯ ಚೇತರಿಕೆಗಾಗಿ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಪೇಜಾವರ ಶ್ರೀ ತಿಳಿಸಿದ್ದಾರೆ.

- Advertisement -

Latest News

error: Content is protected !!