Thursday, June 4, 2026
Homeಕರಾವಳಿಉಡುಪಿಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಗೈದಿರುವುದು ಕಳವಳಕಾರಿ ಸಂಗತಿ: ಸರ್ಕಾರಗಳ ಮೇಲೆ ವಿಶ್ವಾಸ, ನಂಬಿಕೆ ಕಳೆದುಕೊಳ್ಳುವ...

ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಗೈದಿರುವುದು ಕಳವಳಕಾರಿ ಸಂಗತಿ: ಸರ್ಕಾರಗಳ ಮೇಲೆ ವಿಶ್ವಾಸ, ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ- ಪೇಜಾವರ ಶ್ರೀ ಹೇಳಿಕೆ

- Advertisement -
- Advertisement -

ಉಡುಪಿ:  ಪ್ರವೀಣ್ ನೆಟ್ಟಾರು ಹತ್ಯೆಗೆ ಪೇಜಾವರ ಶ್ರೀಗಳು‌ ಭಾರೀ ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರವೀಣ್ ಹತ್ಯೆಗೈಸಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮನುಷ್ಯ ಮನುಷ್ಯನನ್ನು ಕೊಲೆ ಮಾಡುವುದು ಹೇಯ ಕೃತ್ಯವಾಗಿದ್ದು, ಇಂದಿನ ಈ ಘಟನೆಯಿಂದ ಇಡಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ರಾಜ್ಯ ಸರ್ಕಾರ ಕೊಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೆಕಿದೆ ಎಂದಿದ್ದಾರೆ.

ರಾಜ್ಯದಲ್ಲಿ ಈ ರೀತಿಯ ದುಷ್ಕೃತ್ಯಗಳು ನಿರಂತರವಾಗಿ ಮುಂದುವರಿದ ಪರಿಣಾಮ ಜನಾಕ್ರೋಶ ಹೆಚ್ಚಾಗಿದೆ. ಸರ್ಕಾರಗಳ ಮೇಲೆ ವಿಶ್ವಾಸ, ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.

ಹಿಂದೂಗಳ ತಾಳ್ಮೆ, ಸಹನೆಯ ಕಟ್ಟೆ ಒಡೆಯುವಷ್ಟು ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂತ ಸಮಯದಲ್ಲಿ ಅದು ಸಹಜವು ಆಗಿದೆ. ಹಾಗೆಂದ ಮಾತ್ರಕ್ಕೆ ಯಾರೂ ಧೈರ್ಯ ಕಳೆದುಕೊಳ್ಳಬಾರದು. ಶಾಂತಿಯಿಂದ ಒಗ್ಗಟ್ಟು ಕಾಯ್ದುಕೊಳ್ಳಬೇಕು. ಈ ಸಾವು ಅತೀವ ನೋವು ತರಿಸಿದೆ. ಮೃತ ಪ್ರವೀಣ ನೆಟ್ಟಾರು ಅವನ ಆತ್ಮಕ್ಕೆ ಸದ್ಗತಿ ದೊರೆಯಲಿ. ಕುಟುಂಬದವರಿಗೆ ಪ್ರವೀಣ್ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

- Advertisement -

Latest News

error: Content is protected !!