- Advertisement -
- Advertisement -
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಆರೋಪದಡಿ ಆರೋಪಿಗಳಿಬ್ಬರನ್ನು SIT ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.ಹೈಕೋರ್ಟಿಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಅವರು ಹೈಕೋರ್ಟಿಗೆ ಬಂದಿದ್ದರು.
ಈ ವೇಳೆ ನವೀನ್ ಗೌಡ ಹಾಗೂ ಚೇತನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.ಆರೋಪಿ ನವೀನ್ ಗೌಡ ಇದುವರೆಗೂ ಅರೆಸ್ಟ್ ಆಗದ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿದ್ದವು. ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಪ್ರಶ್ನೆ ಮಾಡಿದ್ದರು. ಇದೀಗ ಕೊನೆಗೂ ಇಬ್ಬರು ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
- Advertisement -