Sunday, June 7, 2026
Homeಕರಾವಳಿಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ವಿಡಿಯೋ ವೈರಲ್

ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿದ ವಿಡಿಯೋ ವೈರಲ್

- Advertisement -
- Advertisement -

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮುಖಂಡ ಸೇರಿ 9 ಜನರ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ, ಇತ್ತ  ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಜಾಗದ ತಕರಾರಿನ ಹಿನ್ನೆಲೆಯಲ್ಲಿ ತಂಡವೊಂದು ಆದಿವಾಸಿ ಮಹಿಳೆ ಮೇಲೆ ಹಲ್ಲೆ ನಡೆಸಿತ್ತು. ಬಟ್ಟೆ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ಮುಂಡಾಜೆ ಗ್ರಾಮದ ಅರಸಮಜಲು ನಿವಾಸಿ ಚೆನ್ನಕೇಶವ, ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಪ್ರಕರಣ ದಾಖಲಾಗಿದೆ.

ಇದೀಗ ಮಹಿಳೆಯನ್ನು ಅರೆಬೆತ್ತಲುಗೊಳಿಸಿ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆ ಸಂಬಂಧ ಪ್ರಕರದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ‌.

- Advertisement -

Latest News

error: Content is protected !!