Saturday, June 28, 2025
Homeತಾಜಾ ಸುದ್ದಿಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

spot_img
- Advertisement -
- Advertisement -

ಹುಬ್ಬಳ್ಳಿ: ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ‌

ಹುಬ್ಬಳ್ಳಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ಆರ್ ಎಸ್ ಎಸ್ ಸಂಘಟನೆ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ. ಹಲವಾರು ಸಂದರ್ಭಗಳಲ್ಲಿ ಅನಾಹುತಗಳಾದಾಗ ಜನರ ಸಂಕಷ್ಟಕ್ಕೆ ಸ್ಪಂದಿಸಲು ಅವರ ಪರವಾಗಿ ಆರ್ ಎಸ್ ಎಸ್ ನಿಂತಿದೆ ಎಂದು ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಆರ್ ಎಸ್ ಎಸ್ ಉತ್ತಮವಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಆರ್ ಎಸ್ ಎಸ್ ವಿರೋಧಿಗಳು. ಅವರ ಇಂತಹ ಧೋರಣೆಯಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕದಲ್ಲಿಯೂ ಹೀಗೆ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದೇ ವೇಳೆ ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಶಿಕ್ಷಣ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ವಿಪಕ್ಷ ಕಾಂಗ್ರೆಸ್ ಟೀಕೆಗಳಿಗೆ ಉತ್ತರಿಸಿದ್ದಾರೆ.

- Advertisement -
spot_img

Latest News

error: Content is protected !!