Friday, June 5, 2026
Homeಕರಾವಳಿಉಡುಪಿಮಣಿಪಾಲ್ ಕಸ್ತೂರಿ ಬಾ ಆಸ್ಪತ್ರೆಗೆ ಪರ್ಫಾರ್ಮೆನ್ಸ್ ಎಕ್ಸಲೆನ್ಸ್ ಅವಾರ್ಡ್

ಮಣಿಪಾಲ್ ಕಸ್ತೂರಿ ಬಾ ಆಸ್ಪತ್ರೆಗೆ ಪರ್ಫಾರ್ಮೆನ್ಸ್ ಎಕ್ಸಲೆನ್ಸ್ ಅವಾರ್ಡ್

- Advertisement -
- Advertisement -

ಮಣಿಪಾಲ: ಮಣಿಪಾಲದ ಕಸ್ತೂರ್ ಬಾ ಆಸ್ಪತ್ರೆಗೆ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ ಟ್ರಸ್ಟ್ ಮುಂಬೈನಿಂದ ನೀಡಲಾಗುವ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಕಾರ್ಯಕ್ಷಮತೆ ಶ್ರೇಷ್ಠತೆ ಪ್ರಶಸ್ತಿ 2020‌ ದೊರೆತಿದೆ. ಅರೋಗ್ಯ ಕ್ಷೇತ್ರದಲ್ಲಿನ ಸೇವೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ಈ ಪ್ರಶಸ್ತಿಯೊಂದಿಗೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಗುಣಮಟ್ಟ ಮತ್ತು ಮಾನ್ಯತೆಗಳ ಕಿರೀಟಕ್ಕೆ ಮತ್ತೊಂದು ಗರಿ ಸೇರಿದಂತಾಗಿದೆ. ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿಯು ದೇಶದ ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿಗಳಲ್ಲಿ ಒಂದಾಗಿದೆ.

ಈ ಪ್ರಶಸ್ತಿಯನ್ನು ಐಎಂಸಿಯ ಮಾಜಿ ಅಧ್ಯಕ್ಷ ಮತ್ತು ಪ್ರಮುಖ ಕೈಗಾರಿಕೋದ್ಯಮಿಯಾಗಿದ್ದ ದಿ.‌ ರಾಮಕೃಷ್ಣ ಬಜಾಜ್ ರವರ ಹೆಸರಿನಲ್ಲಿ ನೀಡಲಾಗುತ್ತದೆ.

ಈ ಪ್ರಶಸ್ತಿಯನ್ನು ಕಸ್ತೂರಿ ಬಾ ಆಸ್ಪತ್ರೆಗೆ ಸಾಮಾಜಿಕ ಜವಾಬ್ದಾರಿ, ನೈತಿಕ ಮತ್ತು ಪಾರದರ್ಶಕ ಆರೋಗ್ಯ ಸೇವೆ, ಕ್ರಿಯಾತ್ಮಕ ನಾಯಕತ್ವ, ರೋಗಿಗಳ ಕೇಂದ್ರಿತ ಸೇವೆ, ಉದ್ಯೋಗಿಗಳ ದೃಷ್ಟಿಕೋನ, ಅತ್ಯುತ್ತಮ ಸಂಶೋಧನೆ ಮತ್ತು ತಾಂತ್ರಿಕ ಪರಿಣತಿಯೊಂದಿಗೆ ಎಲ್ಲಾ ಸೇವೆಗಳನ್ನು ಕೈಗೆಟುಕುವ ದರದಲ್ಲಿ ಒಂದೇ ಸೂರಿನಡಿ ಒದಗಿಸುತ್ತಿರುವ ಅಂಶಗಳನ್ನು ಗಮನಿಸಿ ನೀಡಲಾಗಿದೆ.

- Advertisement -

Latest News

error: Content is protected !!