Saturday, May 4, 2024
Homeಕರಾವಳಿಉಡುಪಿಕಡಲ ಕೊರೆತ ತಡೆಗೆ ಕೇಂದ್ರ ಸಹಭಾಗಿತ್ವದಲ್ಲಿ ಶಾಶ್ವತ ಪರಿಹಾರ:ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಕಡಲ ಕೊರೆತ ತಡೆಗೆ ಕೇಂದ್ರ ಸಹಭಾಗಿತ್ವದಲ್ಲಿ ಶಾಶ್ವತ ಪರಿಹಾರ:ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿದ ಬಳಿಕ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರೂ ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂಪಾಯಿ ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಲ್ಲದೇ ಮಳೆಯಿಂದ ಮಾನವ ಜೀವ ಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಜಿಲ್ಲೆಯಲ್ಲಿ ಕಾಲು ಸಂಕ ಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!