Friday, June 27, 2025
Homeಉದ್ಯಮಮಂಗಳೂರಿನಲ್ಲಿ ಜಿಲ್ಲಾಡಳಿತದಿಂದ ಎಲೆಕ್ಟ್ರಿಕ್ ಆಟೊರಿಕ್ಷಾಗಳಿಗೆ ಅನುಮತಿ; ರಿಕ್ಷಾ ಚಾಲಕರಿಂದ ಪ್ರತಿಭಟನೆ

ಮಂಗಳೂರಿನಲ್ಲಿ ಜಿಲ್ಲಾಡಳಿತದಿಂದ ಎಲೆಕ್ಟ್ರಿಕ್ ಆಟೊರಿಕ್ಷಾಗಳಿಗೆ ಅನುಮತಿ; ರಿಕ್ಷಾ ಚಾಲಕರಿಂದ ಪ್ರತಿಭಟನೆ

spot_img
- Advertisement -
- Advertisement -

ಮಂಗಳೂರು: ಜಿಲ್ಲೆಯಾದ್ಯಂತ ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಸಂಚರಿಸಲು ಜಿಲ್ಲಾಡಳಿತ ಅನುಮತಿ ನೀಡಿರುವುದನ್ನು ವಿರೋಧಿಸಿ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೊರಿಕ್ಷಾ ಚಾಲಕರು, ಕ್ಲಾಕ್ ಟವರ್ ವರೆಗೆ ಮೆರವಣಿಗೆ‌ ನಡೆಸಿ ಪ್ರತಿಭಟನೆ‌ ನಡೆಸಿದರು.

ಈ ವೇಳೆಯಲ್ಲಿ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ‘ಜಿಲ್ಲಾಧಿಕಾರಿಯು ಎಲೆಕ್ಟ್ರಿಕ್ ರಿಕ್ಷಾಗಳಿಗೆ‌ ಜಿಲ್ಲೆಯಾದ್ಯಂತ ಸಂಚಾರಕ್ಕೆ ಅನುಮತಿ ನೀಡಿದ್ದು, ಈ ಆದೇಶವು ಏಕಪಕ್ಷೀಯವಾಗಿದೆ. ತಕ್ಷಣವೇ ಅವರು ಆದೇಶ‌ವನ್ನು ವಾಪಸ್ ಪಡೆಯಬೇಕು. ಹೊಟ್ಟೆಪಾಡಿಗಾಗಿ‌ ದುಡಿಯುವ ರಿಕ್ಷಾ ಚಾಲಕರ ಬದುಕಿಗೆ‌ ಕೊಳ್ಳಿ ಇಟ್ಟಂತೆ ಆಗಿದೆ. ಡಿಸಿ ಸ್ಥಳಕ್ಕೆ ಬರಬೇಕು ಅಥವಾ ಅವರು ಅಧಿಕೃತ ಅಧಿಕಾರಿಯನ್ನು ಸ್ಥಳಕ್ಕೆ‌ ಕಳುಹಿಸುವವರೆಗೆ ಸ್ಥಳದಿಂದ ಕದಲುವುದಿಲ್ಲ. ಈ ಆದೇಶವನ್ನು ಹಿಂಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ,’ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಈ ಆದೇಶ ಹೊರಡಿಸಲಾಗಿದ್ದು, ಇದು ಕೇಂದ್ರ ಸರ್ಕಾರದ ತೀರ್ಮಾನ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಪಕ್ಕದ ಉಡುಪಿಯಲ್ಲಿ ಇಂತಹ ಯೋಜನೆ ಅನುಷ್ಠಾನ ಗೊಂಡಿಲ್ಲ. ಜಿಲ್ಲಾಡಳಿತ ಎಲೆಕ್ಟ್ರಿಕ್ ಕಂಪನಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಸಂಘಟನೆ ಪ್ರಮುಖರಾದ ಅಶೋಕ ಶೆಟ್ಟಿ, ಭರತ್, ಮುಹಮ್ಮದ್ ಅನ್ಸಾರ್, ಲೋಕೇಶ್ ಬಲ್ಲಾಳ್ ಬಾಗ್‌ ಮತ್ತಿತರರು ಉಪಸ್ಥಿತರಿದ್ದರು. ಚಾಲಕರು ರಿಕ್ಷಾ ಸಂಚಾರ ಬಂದ್ ಮಾಡಿ ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.

- Advertisement -
spot_img

Latest News

error: Content is protected !!