- Advertisement -
![]()
- Advertisement -
ಮಂಗಳೂರು: ಜಿಲ್ಲಾಧಿಕಾರಿ ಕೆಂಪುಕಲ್ಲಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದು, ಈ ಬಗ್ಗೆ ಅಂತಿಮ ನಿರ್ದೇಶನಗಳನ್ನು ನೀಡಿ, ಮಾರ್ಗ ಸೂಚಿಯ ಪ್ರಕಾರವೇ ಕೆಂಪು ಕಲ್ಲು ತೆಗೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಾನ್ ಸಿಆರ್‌ಝಡ್ ಮರಳು ಪಡೆಯಲು ಟೆಂಡರ್ ಮೂಲಕ ತೆಗೆಯಲು ಅವಕಾಶ ಮಾಡಿಕೊಡಲಾಗಿದೆ. ಸಿಆರ್‌ಝಡ್ ಮರಳು ವಿಷಯ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದು ಗುರುವಾರ ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಅವರು ತಿಳಿಸಿ ಜಿಲ್ಲೆಗೆ ಎಷ್ಟು ಅನುದಾನ ಬಂದಿದೆ ನೋಡಿಕೊಂಡು ಶೀಘ್ರದಲ್ಲೇ ಕಾಮಗಾರಿಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದರು.
- Advertisement -


