Friday, June 5, 2026
Homeಕರಾವಳಿಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಂಡಿದ್ದ ಯುವಕ ಆತ್ಮಹತ್ಯೆ

ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಂಡಿದ್ದ ಯುವಕ ಆತ್ಮಹತ್ಯೆ

- Advertisement -
- Advertisement -

ಕಡಬ: ಮನೆಯಲ್ಲೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೊರಂಕಲ ನಿವಾಸಿ ಅಗಿರುವ ಶೆಬಿನ್(25) ಎಂಬಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಕೆಲವು ತಿಂಗಳ ಹಿಂದೆ ಗೋಳಿತ್ತೊಟ್ಟು ಸಮೀಪ ನಡೆದಿದ್ದ ಅಪಘಾತದಲ್ಲಿ ಬೈಕ್‌ ಸಹಸವಾರರಾಗಿದ್ದ ಶೆಬಿನ್‌ ಗಾಯಗೊಂಡು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.‌ ಚೇತರಿಸಿಕೊಂಡಿದ್ದ ಮತ್ತೆ ಕೊರಿಯರ್ ಕೆಲಸದಲ್ಲಿ ತೊಡಗಿಕೊಂಡಿದ್ದ ಶೆಬಿನ್‌ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಸ್ ಐ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಾಲಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶೆಬಿನ್‌ ತಾಯಿ ಎಲ್ಸಮ್ಮ, ಸಹೋದರ ಲಿಜೋರನ್ನು ಅಗಲಿದ್ದಾರೆ.

- Advertisement -

Latest News

error: Content is protected !!