Saturday, August 29, 2026
Homeಕರಾವಳಿಉಡುಪಿಉಡುಪಿ: ರಸ್ತೆಯಲ್ಲಿ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಉಡುಪಿ: ರಸ್ತೆಯಲ್ಲಿ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

- Advertisement -
- Advertisement -

ಉಡುಪಿ: ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೈಂದೂರು ತಾಲೂಕಿನ ಶಿರೂರಿನಲ್ಲಿ ಸಂಭವಿಸಿದೆ.

ಇರ್ಷಾದ್ (56) ಮೃತ ಪಟ್ಟಿರುವ ವ್ಯಕ್ತಿಯಾಗಿದ್ದು, ಮನೆಯಿಂದ ರಸ್ತೆಗೆ ಬಂದಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಗಮನಿಸದೇ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ ಸುರಿದಿದ್ದ ಗಾಳಿ ಮಳೆಗೆ ತಂತಿ ತುಂಡಾಗಿ ಬಿದ್ದಿತ್ತು ಎಂದು ಹೇಳಲಾಗಿದ್ದು, ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!