Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ ನೀರು ತುಂಬಿದ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಕಾಸರಗೋಡಿನಲ್ಲಿ ನೀರು ತುಂಬಿದ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

- Advertisement -
- Advertisement -

ಕಾಸರಗೋಡು : ನೀರು ತುಂಬಿದ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ನೀಲೇಶ್ವರ ಬಳಿ ನಡೆದಿದೆ. 55 ವರ್ಷದ ರಘುನಾಥ್ ಮೃತ ವ್ಯಕ್ತಿ.

ಶನಿವಾರ ಸಂಜೆ ರಘುನಾಥ್ ಕೆಲಸ ಮುಗಿಸಿ ಮರಳುತ್ತಿದ್ದಾಗ ಮನೆ ಬಳಿ ನೀರು ತುಂಬಿದ್ದ ಕೆಂಗಲ್ಲು ಕೋರೆಗೆ ಬಿದ್ದಿದ್ದಾರೆ. ಕೂಡಲೇ ಮಾಹಿತಿ ತಿಳಿದ ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ದರೂ ಅವರು ಬದುಕುಳಿಯಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಮೃತದೇಹವನ್ನು ಕೋವಿಡ್ ತಪಾಸಣೆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟುಕೊಡಲಿದ್ದಾರೆ. ಈ ಸಂಬಂಧ ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!