Wednesday, June 3, 2026
Homeಕರಾವಳಿಉಡುಪಿಉಡುಪಿ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಹಗ್ಗ ತುಂಡಾಗಿ ಬಿದ್ದು ವ್ಯಕ್ತಿ ಸಾವು!

ಉಡುಪಿ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಹಗ್ಗ ತುಂಡಾಗಿ ಬಿದ್ದು ವ್ಯಕ್ತಿ ಸಾವು!

- Advertisement -
- Advertisement -

ಉಡುಪಿ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ನೇಣು ಕುಣಿಕೆ ತುಂಡಾಗಿ ವ್ಯಕ್ತಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದ್ದು
ಮೆಲ್ರಾಯ್( 55) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.

ಮನೆಯ ಮೊದಲ ಮಹಿಡಿಯ ಮೇಲ್ಛಾವಣಿಗೆ ನೇಣು ಬಿಗಿದು ಮೆಲ್ರಾಯ್ ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಈ ವೇಳೆ ಹಗ್ಗ ತುಂಡಾದ ಕಾರಣ ಮೆಲ್ರಾಯ್ ನೆಲಕ್ಕೆ ಬಿದ್ದಿದ್ದಾರೆ.

ಇಪ್ಪತ್ತು ಅಡಿಗೂ ಹೆಚ್ಚು ಎತ್ತರದಿಂದ ಬಿದ್ದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯಗಳಾದ್ದು ಮೆಲ್ರಾಯ್
ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Latest News

error: Content is protected !!