Thursday, June 4, 2026
Homeಇತರಕಡಬ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಡಬ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಕಡಬ: ಕೃಷಿ ತೋಟಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಾಣಿಯೂರು ಸಮೀಪದ ಪುಂಚತ್ತಾರ್ ಎಂಬಲ್ಲಿ ನಡೆದಿದೆ. ಮೃತರನ್ನು ಸುಂದರ ಪೂಜಾರಿ ಎಂಬವರ ಪುತ್ರ ಹರೀಶ್ (29) ಎಂದು ಗುರುತಿಸಲಾಗಿದೆ.

ವ್ಯಕ್ತಿಯೊಬ್ಬರ ಚಪ್ಪಲಿ ಕೆರೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ, ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Latest News

error: Content is protected !!