- Advertisement -
![]()
- Advertisement -
ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿಯಲ್ಲೇ ವ್ಯಕ್ತಿಯೊಬ್ಬರು ಮೀನು ಹಿಡಿದು, ಬಟ್ಟೆ ಒಗೆದು ವ್ಯಂಗ್ಯ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯದ ಬಳಿ ಅವ್ಯವಸ್ಥೆ ಉಂಟಾಗಿದೆ.
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನ ಹರಿಸದ ಕಾರಣ ಬೇಸತ್ತ ಕೋಳಿಪಾಳ್ಯ ನಿವಾಸಿ ದೇವರಾಜು ಎಂಬುವರು ಹೆದ್ದಾರಿಯಲ್ಲಿ ನಿಂತು ನೀರಿನಲ್ಲಿ ಮೀನು ಹಿಡಿದು, ಬಟ್ಟೆ ಒಗೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರತಿ ನಿತ್ಯ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು, ರಸ್ತೆಯಲ್ಲಿ ನಿಂತ ನೀರಿನಿಂದಾಗಿ ವಾಹನ ಸವಾರರ ಪರದಾಟ ನಡೆಸುವಂತಾಗಿದೆ.
- Advertisement -


