Monday, June 30, 2025
Homeಕರಾವಳಿಮಂಗಳೂರುಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡುತ್ತಿದ್ದ ಖತರ್ನಾಕ್ ವ್ಯಕ್ತಿ ಅರೆಸ್ಟ್

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡುತ್ತಿದ್ದ ಖತರ್ನಾಕ್ ವ್ಯಕ್ತಿ ಅರೆಸ್ಟ್

spot_img
- Advertisement -
- Advertisement -

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೆ. ಉಮ್ಮರಬ್ಬ ಮೈದೀನ್ ಬಂಧಿತ ಆರೋಪಿ.

 ಆರೋಪಿ ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡುತ್ತಿದ್ದ. ಆರೋಪಿಯ ದಸ್ತಗಿರಿಗೆ ಪೊಲೀಸ್ ಆಯುಕ್ತರು ಮಂಗಳೂರು ನಗರ ಹಾಗೂ ಉಪ ಪೋಲಿಸ್ ಆಯುಕ್ತರು ಮಂಗಳೂರು ನಗರ ರವರುಗಳು ನೀಡಿದ ಸೂಕ್ತ ಮಾರ್ಗದರ್ಶನ ಹಾಗೂ ಸಹಾಯಕ ಪೊಲೀಸ್ ಆಯುಕ್ತರು ಕೇಂದ್ರ ಉಪವಿಭಾಗ ರವರ ಸೂಚನೆಯಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರವರ ನೇತೃತ್ಬದಲ್ಲಿ ಠಾಣಾ ಪಿ ಎಸ್ ಐ ಹಾಗೂ ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

- Advertisement -
spot_img

Latest News

error: Content is protected !!