Thursday, June 4, 2026
Homeತಾಜಾ ಸುದ್ದಿಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ನಿಧನ

- Advertisement -
- Advertisement -

ದುಬೈ : ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅನಾರೋಗ್ಯದಿಂದ  ದುಬೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮುಷರಫ್ ಅವರಿಗೆ ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಅವರ ಅನಾರೋಗ್ಯದ ಸಮಸ್ಯೆಯಿಂದಾಗಿ ಅವರನ್ನು ಒಂದೆರಡು ವಾರಗಳ ಕಾಲ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ. 1999 ರಲ್ಲಿ ಪಾಕಿಸ್ತಾನದ ಮಿಲಿಟರಿ ದಂಗೆಯ ನಂತರ ಮುಷರಫ್ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿದ್ದರು. ಅವರು 1998 ರಿಂದ 2001 ರವರೆಗೆ 10 ನೇ ಸಿಜೆಸಿಎಸ್ಸಿಯಾಗಿ ಮತ್ತು 1998 ರಿಂದ 2007 ರವರೆಗೆ 7 ನೇ ಉನ್ನತ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.

- Advertisement -

Latest News

error: Content is protected !!