Thursday, June 4, 2026
HomeUncategorized5 ಮತ್ತು 8 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವಿಚಾರ; ಇಂದು ಹೈಕೋರ್ಟ್ ನಲ್ಲಿ ಅರ್ಜಿ...

5 ಮತ್ತು 8 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವಿಚಾರ; ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ

- Advertisement -
- Advertisement -

ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ಇಂದು ಹೈಕೋರ್ಟ್ ನ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಮೌಲ್ಯಾಂಕ ಪರೀಕ್ಷೆ ನಿರ್ಧಾರವಾಗುವ ಸಾಧ್ಯತೆ ಇದೆ.

ಹೈಕೋರ್ಟ್ ನ ವಿಭಾಗೀಯ ಪೀಠವು ಪರೀಕ್ಷೆ ನಡೆಸಲು ಅನುಮತಿ ನೀಡಿದರೆ ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮೌಲ್ಯಾಂಕನ ಪರೀಕ್ಷೆ ನಡೆಸಬೇಕಾಗುತ್ತದೆ.

ಒಂದು ವೇಳೆ ಅನುಮತಿ ನೀಡದಿದ್ದರೆ, ಮಂಡಳಿ ಪರೀಕ್ಷೆ ಬದಲಾಗಿ ಆಯಾ ಶಾಲಾ ಹಂತದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ.

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ.

- Advertisement -

Latest News

error: Content is protected !!