Sunday, June 7, 2026
Homeತಾಜಾ ಸುದ್ದಿವಾರಾಂತ್ಯದಲ್ಲಿ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ-ಜನರ ಕೆಂಗಣ್ಣಿಗೆ ಗುರಿಯಾದ ಕೇಂದ್ರ ಸರ್ಕಾರ!..

ವಾರಾಂತ್ಯದಲ್ಲಿ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ-ಜನರ ಕೆಂಗಣ್ಣಿಗೆ ಗುರಿಯಾದ ಕೇಂದ್ರ ಸರ್ಕಾರ!..

- Advertisement -
- Advertisement -

ನವದೆಹಲಿ: ಕೊರೋನ ಅಬ್ಬರದಿಂದ ಜನ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ. ಈ ಮಧ್ಯೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಕೇಂದ್ರ ಸರ್ಕಾರ ಕಳೆದ ವಾರದಂತೆ ಈ ವಾರದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಕಳೆದ ವಾರಾಂತ್ಯದಲ್ಲಿ ಸತತವಾಗಿ ನಾಲ್ಕು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳವಾಗಿದೆ. ನವೆಂಬರ್ 27, 28ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಡಿಸೆಂಬರ್ 2ರಂದು ಪುನಃ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿತ್ತು. ಈ ದರ ಇಂದೂ ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಕೆ ಕಂಡಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು ಸಾಮಾನ್ಯ ಆದರೆ ಈಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಕಂಡಿಲ್ಲ. ಆದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

- Advertisement -

Latest News

error: Content is protected !!