Friday, May 3, 2024
Homeತಾಜಾ ಸುದ್ದಿಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ಸ್ಥಗಿತ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ಸ್ಥಗಿತ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

spot_img
- Advertisement -
- Advertisement -

ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತದಲ್ಲಿ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪರ್ಯಾಯ ಇಂಧನ ಬಳಕೆಯ ಮಹತ್ವದ ಕುರಿತು ಮಾತನಾಡಿದರು.

‘ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಗಡ್ಕರಿ ಎತ್ತಿ ತೋರಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

- Advertisement -
spot_img

Latest News

error: Content is protected !!