Friday, May 3, 2024
Homeತಾಜಾ ಸುದ್ದಿಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ: ಪೆಟ್ರೋಲ್‌, ಡೀಸೆಲ್‌, ಗ್ಯಾಸ್...

ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ: ಪೆಟ್ರೋಲ್‌, ಡೀಸೆಲ್‌, ಗ್ಯಾಸ್ ದರ ಇಳಿಕೆ

spot_img
- Advertisement -
- Advertisement -

ನವದೆಹಲಿ: ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ. ಪೆಟ್ರೋಲ್‌, ಡೀಸೆಲ್‌, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್  ದರದಲ್ಲಿ ಇಳಿಕೆಯಾಗಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಜಾಗತಿಕವಾಗಿ ರಸಗೊಬ್ಬರ ಬೆಲೆ ಏರಿಕೆಯಾಗುತ್ತಿದ್ದರೂ ಇಂತಹ ಬೆಲೆ ಏರಿಕೆಯಿಂದ ನಮ್ಮ ರೈತರನ್ನು ರಕ್ಷಿಸಿದ್ದೇವೆ. ಬಜೆಟ್‌ನಲ್ಲಿ 1.05 ಲಕ್ಷ ಕೋಟಿ ರೂ. ರಸಗೊಬ್ಬರ ಸಬ್ಸಿಡಿ ಜೊತೆಗೆ ಹೆಚ್ಚುವರಿಯಾಗಿ 1.10 ಲಕ್ಷ ಕೋಟಿ ರೂ. ರೈತರಿಗೆ ಅನುಕೂಲವಾಗುವಂತೆ ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಡವರು ಮತ್ತು ಸಾಮಾನ್ಯರಿಗೆ ಸಹಾಯ ಮಾಡುವ ಬದ್ಧತೆಯೊಂದಿಗೆ ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ ಗೆ 6 ರೂ. ನಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ. ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್‌ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ. ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿ ಕಸ್ಟಮ್ಸ್ ಸುಂಕವನ್ನು ಸಹ ಕಡಿಮೆ ಮಾಡುತ್ತಿದ್ದು, ಇದರಿಂದ MSME, ರಾಸಾಯನಿಕಗಳು, ಪ್ಲಾಸ್ಟಿಕ್ ಅಂತಿಮ ಉತ್ಪನ್ನಗಳ ವೆಚ್ಚ ಕಡಿಮೆಯಾಗಲಿದೆ.

ಕಚ್ಚಾ ವಸ್ತುಗಳು, ಕಬ್ಬಿಣ ಮತ್ತು ಉಕ್ಕಿನ ಬೆಲೆಗಳನ್ನು ಕಡಿಮೆ ಮಾಡಲು ಕಸ್ಟಮ್ಸ್ ಸುಂಕವನ್ನು ಮಾಪನ ಮಾಡಲಾಗುತ್ತಿದೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುವುದು. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುತ್ತದೆ. ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!