- Advertisement -
![]()
- Advertisement -
ನವದೆಹಲಿ: ವಾಹನ ಸವಾರರ ಜೇಬಿಗೆ ಕೇಂದ್ರ ಸರ್ಕಾರಮತ್ತೆ ಬರೆ ಎಳೆದಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ 2.61 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2.71 ರೂ. ಏರಿಕೆಯಾಗಿದೆ. ಈ ಮೂಲಕಪೆಟ್ರೋಲ್ ಹಾಗೂ ಡೀಸೆ ಬೆಲೆ ಕಳೆದ 10 ದಿನಗಳಲ್ಲಿ 4ನೇ ಬಾರಿ ಏರಿಕೆಯಾದಂತಾಗಿದೆ.
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ. ಮೇ 15 ರಂದು ಮೊದಲ ಬಾರಿಗೆ ಏಕಾಏಕಿ ಪೆಟ್ರೋಲ್, ಡೀಸೆಲ್ ಮೇಲಿನ ಬೆಲೆಯನ್ನು 3 ರೂ. ಹೆಚ್ಚಳ ಮಾಡಿತ್ತು. ಬಳಿಕ ಮೇ 23 ರಂದು ಪೆಟ್ರೋಲ್ ದರವನ್ನು 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಪೆಟ್ರೋಲ್ ಮೇಲಿನ ಬೆಲೆ 2.61 ರೂ. ಮತ್ತು ಡೀಸೆಲ್ ಮೇಲಿನ ಬೆಲೆ 2.71 ರೂ. ಏರಿಸಿದ್ದು, ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
- Advertisement -


