Monday, June 8, 2026
Homeತಾಜಾ ಸುದ್ದಿಮುನ್ನೆಚ್ಚರಿಕಾ ಕ್ರಮವಾಗಿ ಪಿಎಫ್ ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ; ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ.

ಮುನ್ನೆಚ್ಚರಿಕಾ ಕ್ರಮವಾಗಿ ಪಿಎಫ್ ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ; ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ.

- Advertisement -
- Advertisement -

ಶಿವಮೊಗ್ಗ: ರಾಜ್ಯಾದ್ಯಂತ ಪಿಎಫ್ಐ ಕಾರ್ಯಕರ್ತರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ರಾಜ್ಯಾದ್ಯಂತ ಪೊಲೀಸರು ದಾಳಿ ಮಾಡಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದ್ದಾರೆ. ವಶಕ್ಕೆ ಪಡೆದವರನ್ನು ಆಯಾ ತಹಶೀಲ್ದಾರ್ ಕೋರ್ಟ್ ಗೂ ಹಾಜರು ಪಡಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈ ಹಿಂದೆ ಎನ್ಐಎ ದಾಳಿ ನಡೆದಾಗ ಇವರೆಲ್ಲರೂ ಆತಂಕ ಸೃಷ್ಟಿಸಿದ್ದರು, ಇವರಿಂದ ಮುಂದೆ ಕೂಡ ಶಾಂತಿ ಭಂಗ ಆಗಬಹುದು ಎಂಬ ಕಾರಣಕ್ಕೆ ಮುಂಜಾಗ್ರತೆ ಕ್ರಮವಾಗಿ ಆರೆಸ್ಟ್ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

Latest News

error: Content is protected !!