Saturday, June 6, 2026
HomeಅಪರಾಧBig Breaking : ಕೇಂದ್ರ ಸರ್ಕಾರದಿಂದ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳ ನಿಷೇಧ

Big Breaking : ಕೇಂದ್ರ ಸರ್ಕಾರದಿಂದ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳ ನಿಷೇಧ

- Advertisement -
- Advertisement -

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು 5 ವರ್ಷ ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಪಿಎಫ್‌ಐ ಹಾಗು ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ದೇಶಾದ್ಯಂತ ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.

- Advertisement -

Latest News

error: Content is protected !!