Thursday, June 4, 2026
Homeಕರಾವಳಿಧರ್ಮಸ್ಥಳದ ಕನ್ಯಾಡಿಯಲ್ಲಿ ಪಿ.ಎಫ್.ಐ. ವತಿಯಿಂದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ

ಧರ್ಮಸ್ಥಳದ ಕನ್ಯಾಡಿಯಲ್ಲಿ ಪಿ.ಎಫ್.ಐ. ವತಿಯಿಂದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ

- Advertisement -
- Advertisement -

ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಧರ್ಮಸ್ಥಳ ಗ್ರಾಮದ ಕನ್ಯಾಡಿ ಎಂಬಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ರಫೀಕ್ ಸಅದಿ ಖತೀಬರು ಬದ್ರಿಯಾ ಜುಮಾ ಮಸೀದಿ ಕನ್ಯಾಡಿ ದುಆ ಮೂಲಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಉಜಿರೆ ಡಿವಿಷನ್ ಅಧ್ಯಕ್ಷರು ಮುಹಮ್ಮದ್ ಆಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಹೈದರ್ ನೀರ್ಸಾಲ್, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷರಾದ ಶಮೀಮ್ ಹಾಗೂ ಊರ ಹಿರಿಯರು, ಹಿತೈಷಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!