ತೊಡಿಕಾನ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದಲ್ಲಿ ಇರುವಂತಹ ದೇವರಗುಂಡಿ ಫಾಲ್ಸ್ ನಲ್ಲಿ ಬೆಂಗಳೂರಿನ ಇಬ್ಬರು ಮಾಡೆಲ್ ಗಳು ಅರೆಬೆತ್ತಲೆಯಾಗಿ ಫೋಟೋ ನಡೆಸಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸುಳ್ಯದ ತೋಡಿಕಾನ ಸಮೀಪ ಇರುವ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿರುವ ದೇವರಗುಂಡಿ ಫಾಲ್ಸ್ ನಲ್ಲಿ ಮಾಡೆಲ್ ಗಳಾದ ಬೃಂದಾ ಅರಸ್ ಮತ್ತು ಆಕೆಯ ಸ್ನೇಹಿತೆ ಫೋಟೋಶೂಟ್ ನಡೆಸಿದ್ದಾರೆ.

ದೇವರಗುಂಡಿಯಲ್ಲಿ ಸಾಕ್ಷಾತ್ ಶಿವನೇ ಸ್ನಾನಕ್ಕೆ ಬರುತ್ತಿದ್ದ ಅನ್ನೊ ಐತಿಹ್ಯ ಇದೆ. ಈ ಹಿನ್ನಲೆಯಲ್ಲಿ ಕ್ಷೇತ್ರದ ಭಕ್ತರಾಗಲಿ ಅಥವಾ ಸ್ಥಳೀಯರು ಈ ಫಾಲ್ಸ್ ನಲ್ಲಿ ಸ್ನಾನ ಮಾಡುವುದಿಲ್ಲ. ಇಂತಹ ಪವಿತ್ರ ಸ್ಥಳದಲ್ಲಿ ಬೆಂಗಳೂರಿನ ಇಬ್ಬರು ಬಿಕಿನಿ ಸುಂದರಿಯರು ಅರೆಬೆತ್ತಲಾದದ್ದಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ

ಈ ಕುರಿತು ಸ್ಥಳೀಯರು ದೇಗುಲದ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ. ಆದರೆ ನಾವು ಇದಕ್ಕೆ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿಯವರು ಹೇಳಿದ್ದಾರೆ.


