Friday, June 27, 2025
Homeಕರಾವಳಿಮಂಗಳೂರುಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

spot_img
- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!