- Advertisement -


- Advertisement -
ವಿಟ್ಲ: ಸರಕು ಸಾಗಿಸುತ್ತಿದ್ದ ಪಿಕಪ್ ಟ್ರಕ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಬುಧವಾರ ಬೆಳಿಗ್ಗೆ ಅಡ್ಯನಡ್ಕ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಕೇರಳದ ಚೆರ್ಕಳಕ್ಕೆ ಸೈಕಲ್ಗಳನ್ನು ಸಾಗಿಸುತ್ತಿದ್ದ ಪಿಕಪ್, ಕಲ್ಲಡ್ಕ–ವಿಟ್ಲ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಕರ್ನಾಟಕ–ಕೇರಳ ಗಡಿ ಭಾಗದ ಕುದ್ದುಪದವು ಬಳಿ ಅಪಘಾತಕ್ಕೀಡಾಗಿದೆ. ವಾಹನದಲ್ಲಿ ಚಾಲಕ ಪರುಶುರಾಮ್ ಮಾತ್ರ ಇದ್ದರು ಎಂದು ತಿಳಿದುಬಂದಿದೆ.
Ranjitha SiddakatteEdit Profile
ರಸ್ತೆ ಬದಿಯಲ್ಲಿ ಪೈಪ್ಲೈನ್ ಕಾಮಗಾರಿಗಾಗಿ ಅಗೆದಿದ್ದ ಗುಂಡಿಗೆ ಪಿಕಪ್ನ ಚಕ್ರ ಸಿಲುಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ಹೆದ್ದಾರಿಯಲ್ಲಿ ಇತರ ವಾಹನಗಳ ಸಂಚಾರ ವಿರಳವಾಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
- Advertisement -


