Wednesday, August 19, 2026
Homeಕರಾವಳಿಮಂಗಳೂರುಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಆಗಸ್ಟ್ 15ರಂದು ಬೆಳಗ್ಗೆ 9.45 ರ ಸುಮಾರಿಗೆ ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ KA-21-B-0593 ನೋಂದಣಿ ಸಂಖ್ಯೆಯ ಮಹೇಂದ್ರ ಬೊಲೆರೋ ಪಿಕ್‌ಅಪ್ ವಾಹನವನ್ನು ನಿಲ್ಲಿಸಲು ಸೂಚಿಸಲಾಗಿದೆ. ಈ ವೇಳೆ ಚಾಲಕ ವಾಹನವನ್ನು ನಿಲ್ಲಿಸಿ ಕೆಳಗಿಳಿದು ಪರಾರಿಯಾಗಿದ್ದಾನೆ.

ವಾಹನವನ್ನು ಪರಿಶೀಲಿಸಿದಾಗ ಹಿಂಬದಿ ಬಾಡಿಯಲ್ಲಿ ಸುಮಾರು 30 ಬುಟ್ಟಿಯಷ್ಟು ಮರಳು ಪತ್ತೆಯಾಗಿದೆ. ಯಾವುದೇ ಇಲಾಖಾ ಅನುಮತಿ ಪಡೆಯದೆ ಹಾಗೂ ಸರ್ಕಾರಕ್ಕೆ ರಾಜಸ್ವ ಪಾವತಿಸದೆ ಮರಳನ್ನು ಸಾಗಾಟ ಮಾಡಿರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳಿನ ಅಂದಾಜು ಮೌಲ್ಯ 5,500 ಹಾಗೂ ಪಿಕ್‌ಅಪ್ ವಾಹನದ ಅಂದಾಜು ಮೌಲ್ಯ 2.50 ಲಕ್ಷ ಎಂದು ಅಂದಾಜಿಸಲಾಗಿದೆ. ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಪಿಕಪ್ ಚಾಲಕ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಫಾಯಾಜ್ ವಿರುದ್ಧ BNS-2023ರ ಕಲಂ 303(2), MMCR Actನ ಕಲಂ 42, 43, 44 ಹಾಗೂ MMRD Actನ ಕಲಂ 4(1), 4(1A), 21(1)(1A) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

- Advertisement -

Latest News

error: Content is protected !!